ಮಧ್ಯಪ್ರದೇಶ, ರಾಜಸ್ಥಾನದಂತಹ ಕೆಲ ರಾಜ್ಯಗಳು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಳನ್ನು ವಿಧಿಸುವ ಕಾನೂನನ್ನು ಜಾರಿಗೆ ತಂದಿದ್ದವು. ಈಗ ಕೇಂದ್ರ ಸರಕಾರವೂ ಇದೆ ತರವಾದ ಕಾನೂನನ್ನು ದೇಶಾದ್ಯಂತ ಜಾರಿಗೆ ತರಲು ಮುಂದಾಗಿದ್ದು, ಸುಗ್ರೀವಾಜ್ಞೆ ಹೊರಡಿಸಿದೆ. ಪ್ರಸಕ್ತ ಇರುವ ಕಾನೂನಿನ ಪ್ರಕಾರ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರಗಳಂತಹ ಅಪರಾಧಕ್ಕೆ ಗರಿಷ್ಠ ಜೀವನಪೂರ್ತಿ ಜೈಲು ಶಿಕ್ಷೆಯನ್ನು ವಿಧಿಸಬಹುದು ಅಥವಾ ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ನೀಡಬಹುದಾಗಿತ್ತು.

ಇನ್ನು ಮುಂದೆ ಈ ಕಾನೂನು ಬದಲಾಗಲಿದ್ದು ಮಕ್ಕಳ ಮೇಲೆ ದೌರ್ಜನ್ಯ ನಡೆಸುವ ಅತ್ಯಾಚಾರಿಗಳನ್ನು ನೇರವಾಗಿ ಗಲ್ಲು ಶಿಕ್ಷೆಗೆ ಒಳಪಡಿಸುವ ಕಾನೂನು ಜಾರಿಗೆ ಬರಲಿದೆ. ಹನ್ನೆರಡು ವರ್ಷದ ಒಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಹೊರಬೀದ್ದಿದೆ. ಇಂದು ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಇದ್ದಂತಹ ಫೋಕ್ಸೊ ಕಾಯಿದೆ ಬದಲಾಗಲಿದೆ.

ಮಕ್ಕಳ ಹಕ್ಕುಗಳ ಸಂರಕ್ಷಣಾ ಕಾಯಿದೆಯ ತಿದ್ದುಪಡಿಯ ಮೂಲಕ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ದೇಶದೆಲ್ಲೆಡೆ ಕಠಿಣ ಸಂದೇಶ ರವಾನಿಸಿದ್ದಾರೆ ಪ್ರಧಾನಮಂತ್ರಿ ನರೇಂದ್ರ ಮೋದಿ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಹೊರಬಿದ್ದಿದೆ. ವಿದೇಶ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಭಾರತಕ್ಕೆ ಮರಳಿದ್ದರು‌‌. ಭಾರತಕ್ಕೆ ಮರಳಿದ ತಕ್ಷಣ ತುರ್ತು ಸಚಿವ ಸಂಪುಟ ಸಭೆ ಕರೆದು ಈ ಸುಗ್ರೀವಾಜ್ಞೆಯನ್ನು ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here